Home ಪರಿಸರನಾಡಿನ ಮಳೆಯ ಸ್ಥಿತಿಗತಿ ವಿವರ

ನಾಡಿನ ಮಳೆಯ ಸ್ಥಿತಿಗತಿ ವಿವರ

by Kumara Raitha
0 comments

ಶುಕ್ರವಾರ, 04 ನೇ  ಆಗಸ್ಟ್ 2023 / 13ನೇ  ಶ್ರಾವಣ 1945 ಶಕ ಬೆಳಿಗ್ಗೆ 0830 ಘಂಟೆಗೆ ದಾಖಲಿಸಿರುವ ವೀಕ್ಷಣೆಯ ಸಾರಾಂಶ:  ನೈರುತ್ಯ ಮುಂಗಾರು ಕರಾವಳಿಯಲ್ಲಿ ಸಾಮಾನ್ಯವಾಗಿತ್ತು ಆದರೆ ಒಳನಾಡಿನಲ್ಲಿ ದುರ್ಬಲವಾಗಿತ್ತು. ಕರಾವಳಿಯ ಬಹುತೇಕ ಕಡೆಗಳಲ್ಲಿ ಮತ್ತು ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಿದೆ.

ಭಾರಿ ಮಳೆ ಪ್ರಮಾಣಗಳು (ಸೆಂ.ಮೀ. ನಲ್ಲಿ): ಕ್ಯಾಸಲ್ ರಾಕ್ (ಉತ್ತರ ಕನ್ನಡ ಜಿಲ್ಲೆ) 8.

ಇತರೆ ಮುಖ್ಯ ಮಳೆ ಪ್ರಮಾಣಗಳು (ಸೆಂ.ಮೀ. ನಲ್ಲಿ): ಗೇರುಸೊಪ್ಪಾ (ಉತ್ತರ ಕನ್ನಡ ಜಿಲ್ಲೆ) 5; ಜಗಲಬೆಟ್ (ಉತ್ತರ ಕನ್ನಡ ಜಿಲ್ಲೆ), ಕೊಲ್ಲೂರು (ಉಡುಪಿ ಜಿಲ್ಲೆ) ತಲಾ 4; ಹೊನ್ನಾವರ, ಕದ್ರಾ, ಶಿರಾಲಿ, ಜೋಯಿಡಾ, ಮಂಕಿ, ಅಂಕೋಲಾ (ಎಲ್ಲವೂ ಉತ್ತರ ಕನ್ನಡ ಜಿಲ್ಲೆ), ಸಿದ್ದಾಪುರ (ಉಡುಪಿ ಜಿಲ್ಲೆ) ತಲಾ 3; ಬೇಲಿಕೇರಿ, ಸಿದ್ದಾಪುರ (ಎರಡೂ ಉತ್ತರ ಕನ್ನಡ ಜಿಲ್ಲೆ), ಧರ್ಮಸ್ಥಳ (ದಕ್ಷಿಣ ಕನ್ನಡ ಜಿಲ್ಲೆ), ಲೋಂಡಾ (ಬೆಳಗಾವಿ ಜಿಲ್ಲೆ), ತಾಳಗುಪ್ಪ, ಅಗ್ರಹಾರ ಕೋಣಂದೂರು, ಲಿಂಗನಮಕ್ಕಿ (ಎಲ್ಲವೂ ಶಿವಮೊಗ್ಗ ಜಿಲ್ಲೆ), ಕೊಟ್ಟಿಗೆಹಾರ, ಶೃಂಗೇರಿ (ಎರಡೂ ಚಿಕ್ಕಮಗಳೂರು ಜಿಲ್ಲೆ) ತಲಾ 2; ಪಣಂಬೂರು, ಸುಳ್ಯ, ಉಪ್ಪಿನಂಗಡಿ, ಪುತ್ತೂರು (ಎಲ್ಲವೂ ದಕ್ಷಿಣ ಕನ್ನಡ ಜಿಲ್ಲೆ), ಕಾರ್ಕಳ, ಕೋಟ (ಎರಡೂ ಉಡುಪಿ ಜಿಲ್ಲೆ), ಕಾರವಾರ, ಗೋಕರ್ಣ, ಕುಮಟಾ, ಮಂಚಿಕೆರೆ, ಯಲ್ಲಾಪುರ, ಬನವಾಸಿ (ಎಲ್ಲವೂ ಉತ್ತರ ಕನ್ನಡ ಜಿಲ್ಲೆ), ಗುಂಜಿ (ಬೆಳಗಾವಿ ಜಿಲ್ಲೆ), ಕಮ್ಮರಡಿ, ಕೊಪ್ಪ (ಎರಡೂ ಚಿಕ್ಕಮಗಳೂರು ಜಿಲ್ಲೆ), ಶನಿವಾರಸಂತೆ, ಸೋಮವಾರಪೇಟೆ (ಎರಡೂ ಕೊಡಗು ಜಿಲ್ಲೆ), ಮಂಡಗದ್ದೆ, ಹುಂಚದಕಟ್ಟೆ (ಎರಡೂ ಶಿವಮೊಗ್ಗ ಜಿಲ್ಲೆ) ತಲಾ 1.

06 ನೇ ಆಗಸ್ಟ್ 2023 ರ ಬೆಳಗ್ಗೆ ವರೆಗಿನ ರಾಜ್ಯದ ಮಳೆ ಮುನ್ಸೂಚನೆ:

ಮುಂದಿನ 24 ಘಂಟೆಗಳು: ಕರಾವಳಿಯ ಬಹುತೇಕ ಕಡೆಗಳಲ್ಲಿ ಮತ್ತು ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.

ಮುಂದಿನ 48 ಘಂಟೆಗಳು: ಕರಾವಳಿಯ ಬಹುತೇಕ ಕಡೆಗಳಲ್ಲಿ ಮತ್ತು ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.

ಭಾರೀ ಮಳೆ ಮುನ್ನೆಚ್ಚರಿಕೆ: ಇಲ್ಲ

ಬಿರುಗಾಳಿ ಮುನ್ನೆಚ್ಚರಿಕೆ:

ಮುಂದಿನ 48 ಘಂಟೆಗಳು: ರಾಜ್ಯದಾದ್ಯಂತ ಒಂದೆರಡು ಕಡೆಗಳಲ್ಲಿ ಬಿರುಗಾಳಿಯ ವೇಗವು ಘಂಟೆಗೆ 30-40 ಕಿ.ಮೀ. ಇರುವ ಸಾಧ್ಯತೆ ಇದೆ.

ಮೀನುಗಾರರಿಗೆ ಎಚ್ಚರಿಕೆ: ಇಲ್ಲ.

ಮುಂದಿನ 24 ಘಂಟೆಗಳ ಹೊರನೋಟ: ರಾಜ್ಯದ ಹವಾಮಾನದಲ್ಲಿ ಹೆಚ್ಚಿನ ಬದಲಾವಣೆ ಇಲ್ಲ.

06 ನೇ ಆಗಸ್ಟ್ 2023 ರ ಬೆಳಗ್ಗೆವರೆಗಿನ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ:

ಮುಂದಿನ 24 ಗಂಟೆಗಳು: ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಕೆಲವೊಮ್ಮೆ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆ ಇದೆ.  ಗರಿಷ್ಠ ಉಷ್ಣಾಂಶ 30 ಮತ್ತು ಕನಿಷ್ಠ ಉಷ್ಣಾಂಶ 20  ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿರುತ್ತದೆ.

ಮುಂದಿನ 48 ಗಂಟೆಗಳು: ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಹಗುರ ಮಳೆಯಾಗುವ ಸಾಧ್ಯತೆ ಇದೆ.   ಕೆಲವೊಮ್ಮೆ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆ ಇದೆ.  ಗರಿಷ್ಠ ಉಷ್ಣಾಂಶ 30 ಮತ್ತು ಕನಿಷ್ಠ ಉಷ್ಣಾಂಶ 20  ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿರುತ್ತದೆ.

You may also like

Leave a Comment

error: Content is protected !!