Home ಸಿನಿಮಾಬೆಂಗಳೂರು ಚಿತ್ರೋತ್ಸವಕ್ಕೆ ಕ್ಷಣಗಣನೆ; ಆರಂಭದಲ್ಲಿ ‘ವಿಶ್ವ ಸಂಗೀತ ಸಂಭ್ರಮ’

ಬೆಂಗಳೂರು ಚಿತ್ರೋತ್ಸವಕ್ಕೆ ಕ್ಷಣಗಣನೆ; ಆರಂಭದಲ್ಲಿ ‘ವಿಶ್ವ ಸಂಗೀತ ಸಂಭ್ರಮ’

by Kumara Raitha
0 comments

ಸಿನಿಮಾ ಪ್ರೇಮಿಗಳು ಕುತೂಹಲ ಮತ್ತು ನಿರೀಕ್ಷೆಯಿಂದ ಕಾಯುತ್ತಿರುವ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ 17ನೇ ಅವತರಣಿಕೆಗೆ ವೇದಿಕೆ ಸಜ್ಜಾಗಿದೆ. ಗುರುವಾರ, ಜನವರಿ 29 ಸಂಜೆ 5ಕ್ಕೆ ವಿಧಾನಸೌಧದ ಮುಂಭಾಗ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಚಿತ್ರೋತ್ಸವಕ್ಕೆ ಚಾಲನೆ ನೀಡಲಿದ್ದಾರೆ.

ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ  ಡಿ.ಕೆ.ಶಿವಕುಮಾರ್‌, ವಿಧಾನ ಪರಿಷತ್‍ನ ಸಭಾಪತಿ ಬಸವರಾಜ ಹೊರಟ್ಟಿ, ವಿಧಾನ ಸಭೆಯ ಸಭಾಧ್ಯಕ್ಷ ಯು.ಟಿ. ಖಾದರ್‍ ಉಪಸ್ಥಿತಿ ಇರುತ್ತದೆ. ಚಿತ್ರೋತ್ಸವದ ರಾಯಭಾರಿ ನಟ ಪ್ರಕಾಶ್‍ ರಾಜ್‍ ಮತ್ತು ನಟಿ ರುಕ್ಮಿಣಿ ವಸಂತ್ ವಿಶೇಷ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಸಂಜೆ 5.30ಕ್ಕೆ ಡಾ. ಜ್ಯೋತ್ಸ್ನಾ ಶ್ರೀಕಾಂತ್‍ ಅವರ ನೇತೃತ್ವದಲ್ಲಿ 35 ಕಲಾವಿದರಿಂದ ‘ವಿಶ್ವ ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಸಂಜೆ ಆರು ಗಂಟೆಗೆ ಸಭಾ ಕಾರ್ಯಕ್ರಮ ಪ್ರಾರಂಭವಾಗಲಿದೆ. ರಾತ್ರಿ 8ಕ್ಕೆ ಚಿತ್ರೋತ್ಸವದ ಉದ್ಘಾಟನಾ ವೇದಿಕೆಯಲ್ಲಿ ನೆದರ್‍ಲ್ಯಾಂಡ್‍ ದೇಶದ ‘ಪೋರ್ಟ್ ಬ್ಯಾಗೇಜ್‍’ ಚಿತ್ರವು ಉದ್ಘಾಟನಾ ಚಿತ್ರವಾಗಿ ಪ್ರದರ್ಶನವಾಗಲಿದೆ.

You may also like

Leave a Comment

error: Content is protected !!