Site icon ಕುಮಾರರೈತ

ಕರ್ನಾಟಕ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆ ಸಾಧ್ಯತೆ

Close-up of wet female hands in rain

ನೈರುತ್ಯ ಮುಂಗಾರು ಕರಾವಳಿಯಲ್ಲಿ ಚುರುಕಾಗಿತ್ತು ಹಾಗೂ ಒಳನಾಡಿನಲ್ಲಿ ಸಾಮಾನ್ಯವಾಗಿತ್ತು. ಕರಾವಳಿಯ ಬಹುತೇಕ ಕಡೆಗಳಲ್ಲಿ; ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಿದೆ.

ಅತಿ ಭಾರೀ ಮಳೆಯ ಪ್ರಮಾಣಗಳು (ಸೆಂ.ಮೀ. ನಲ್ಲಿ):  ಕೊಲ್ಲೂರು (ಉಡುಪಿ ಜಿಲ್ಲೆ) 18; ಸಿದ್ದಾಪುರ (ಉಡುಪಿ ಜಿಲ್ಲೆ) 17; ಗೇರುಸೊಪ್ಪ (ಉತ್ತರ ಕನ್ನಡ ಜಿಲ್ಲೆ) 13; ಮಂಕಿ (ಉತ್ತರ ಕನ್ನಡ ಜಿಲ್ಲೆ) 12.

ಭಾರೀ ಮಳೆಯ ಪ್ರಮಾಣಗಳು (ಸೆಂ.ಮೀ. ನಲ್ಲಿ): ಕದ್ರಾ (ಉತ್ತರ ಕನ್ನಡ ಜಿಲ್ಲೆ), ಕೋಟ (ಉಡುಪಿ ಜಿಲ್ಲೆ) ತಲಾ 10; ಪಣಂಬೂರು (ದಕ್ಷಿಣ ಕನ್ನಡ ಜಿಲ್ಲೆ) 9; ಲಿಂಗನಮಕ್ಕಿ (ಶಿವಮೊಗ್ಗ ಜಿಲ್ಲೆ) 8; ಶಿರಾಲಿ ಪಿಟಿಒ (ಉತ್ತರ ಕನ್ನಡ ಜಿಲ್ಲೆ), ಉಡುಪಿ, ಕುಂದಾಪುರ (ಉಡುಪಿ ಜಿಲ್ಲೆ), ಮಂಗಳೂರು ವಿಮಾನ ನಿಲ್ದಾಣ (ದಕ್ಷಿಣ ಕನ್ನಡ ಜಿಲ್ಲೆ), ತಾಳಗುಪ್ಪ (ಶಿವಮೊಗ್ಗ ಜಿಲ್ಲೆ), ಶೃಂಗೇರಿ (ಚಿಕ್ಕಮಗಳೂರು ಜಿಲ್ಲೆ) ತಲಾ 7.

ಇತರೆ ಮುಖ್ಯ ಮಳೆ ಪ್ರಮಾಣಗಳು (ಸೆಂ.ಮೀ. ನಲ್ಲಿ): ಸಿದ್ದಾಪುರ, ಹೊನ್ನಾವರ (ಎರಡೂ ಉತ್ತರ ಕನ್ನಡ ಜಿಲ್ಲೆ), ಕಾರ್ಕಳ (ಉಡುಪಿ ಜಿಲ್ಲೆ), ಮಂಗಳೂರು (ದಕ್ಷಿಣ ಕನ್ನಡ ಜಿಲ್ಲೆ), ಹುಂಚದಕಟ್ಟೆ (ಶಿವಮೊಗ್ಗ ಜಿಲ್ಲೆ) ತಲಾ 6; ಮಾಣಿ, ಮೂಲ್ಕಿ (ಎರಡೂ ದಕ್ಷಿಣ ಕನ್ನಡ ಜಿಲ್ಲೆ), ಕುಮಟಾ (ಉತ್ತರ ಕನ್ನಡ ಜಿಲ್ಲೆ), ಔರಾದ್ (ಬೀದರ್ ಜಿಲ್ಲೆ), ಕಮ್ಮರಡಿ (ಚಿಕ್ಕಮಗಳೂರು ಜಿಲ್ಲೆ) ತಲಾ 5; ಉಪ್ಪಿನಂಗಡಿ, ಪುತ್ತೂರು, ಸುಳ್ಯ, ಬೆಳ್ತಂಗಡಿ (ಎಲ್ಲವೂ ದಕ್ಷಿಣ ಕನ್ನಡ ಜಿಲ್ಲೆ), ಅಂಕೋಲಾ, ಗೋಕರ್ಣ (ಎರಡೂ ಉತ್ತರ ಕನ್ನಡ ಜಿಲ್ಲೆ), ಸಂತಪುರ (ಬೀದರ್ ಜಿಲ್ಲೆ), ಜಯಪುರ (ಚಿಕ್ಕಮಗಳೂರು ಜಿಲ್ಲೆ) ತಲಾ 4; ಜನಮನೆ, ಬೇಲಿಕೇರಿ, ಕ್ಯಾಸಲ್ ರಾಕ್ (ಎಲ್ಲಾ ಉತ್ತರ ಕನ್ನಡ ಜಿಲ್ಲೆ), ತಾವರಗೇರಾ (ಕೊಪ್ಪಳ ಜಿಲ್ಲೆ), ಕಳಸ, ಕೊಪ್ಪ (ಎರಡೂ ಚಿಕ್ಕಮಗಳೂರು ಜಿಲ್ಲೆ), ತುಮಕೂರು, ತ್ಯಾಗರ್ತಿ (ಶಿವಮೊಗ್ಗ ಜಿಲ್ಲೆ) ತಲಾ 3; ಮಂಚಿಕೆರೆ, ಜೋಯಿಡಾ (ಎರಡೂ ಉತ್ತರ ಕನ್ನಡ ಜಿಲ್ಲೆ), ಧರ್ಮಸ್ಥಳ (ದಕ್ಷಿಣ ಕನ್ನಡ ಜಿಲ್ಲೆ), ಕುಷ್ಟಗಿ, ಗಂಗಾವತಿ ಏ‌ಆರ್‌ಜಿ, ಗಂಗಾವತಿ (ಎಲ್ಲಾ ಕೊಪ್ಪಳ ಜಿಲ್ಲೆ), ಗುಂಜಿ (ಬೆಳಗಾವಿ ಜಿಲ್ಲೆ), ಗುಂಡಗುರ್ತಿ (ಕಲಬುರ್ಗಿ ಜಿಲ್ಲೆ), ರಾಯಚೂರು ಪಿಟಿಒ, ಕಂಪ್ಲಿ (ಬಳ್ಳಾರಿ ಜಿಲ್ಲೆ), ಕೊಟ್ಟಿಗೆಹಾರ, ಬಾಳೆಹೊನ್ನೂರು (ಎರಡೂ ಚಿಕ್ಕಮಗಳೂರು ಜಿಲ್ಲೆ), ಭಾಗಮಂಡಲ, ಮೂರ್ನಾಡು (ಎರಡೂ ಕೊಡಗು ಜಿಲ್ಲೆ), ಮಂಡಗದ್ದೆ (ಶಿವಮೊಗ್ಗ ಜಿಲ್ಲೆ), ತೊಂಡೇಭಾವಿ (ಚಿಕ್ಕಬಳ್ಳಾಪುರ ಜಿಲ್ಲೆ), ಸಕಲೇಶಪುರ (ಹಾಸನ ಜಿಲ್ಲೆ) ತಲಾ 2; ಸುಬ್ರಹ್ಮಣ್ಯ (ದಕ್ಷಿಣ ಕನ್ನಡ ಜಿಲ್ಲೆ), ಬನವಾಸಿ (ಉತ್ತರ ಕನ್ನಡ ಜಿಲ್ಲೆ), ಬೀದರ್, ಸಾಯಿಗಾಂವ್, ಭಾಲ್ಕಿ, ಬೀದರ್ ಪಿಟಿಒ (ಎಲ್ಲ ಬೀದರ್ ಜಿಲ್ಲೆ), ಸಿಂಧನೂರು, ದೇವದುರ್ಗ (ಎರಡೂ ರಾಯಚೂರು ಜಿಲ್ಲೆ), ಲೋಂಡಾ (ಬೆಳಗಾವಿ ಜಿಲ್ಲೆ), ಗುಬ್ಬಿ, ಮಧುಗಿರಿ (ಎರಡೂ ತುಮಕೂರು ಜಿಲ್ಲೆ), ಸುಂಟಿಕೊಪ್ಪ, ನಾಪೋಕ್ಲು, ಸೋಮವಾರಪೇಟೆ, ಶನಿವಾರಸಂತೆ (ಎಲ್ಲಾ ಕೊಡಗು ಜಿಲ್ಲೆ), ಬೆಂಗಳೂರು ನಗರ, ಮೂಡಿಗೆರೆ ಕೆವಿಕೆ (ಚಿಕ್ಕಮಗಳೂರು ಜಿಲ್ಲೆ) ತಲಾ 1.

15 ನೇ ಜುಲೈ 2023 ರ ಬೆಳಗ್ಗೆ ವರೆಗಿನ ರಾಜ್ಯದ ಮಳೆ ಮುನ್ಸೂಚನೆ:

ಮುಂದಿನ 24 ಘಂಟೆಗಳು: ಕರಾವಳಿಯ ಬಹುತೇಕ ಕಡೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಮಳೆ/ ಗುಡುಗುಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.  ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ  ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.

ಮುಂದಿನ 48 ಘಂಟೆಗಳು: ಕರಾವಳಿಯ ಬಹುತೇಕ ಕಡೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಮಳೆ/ ಗುಡುಗುಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.  ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ  ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.

ಭಾರೀ ಮಳೆ ಮುನ್ನೆಚ್ಚರಿಕೆ:

ಮುಂದಿನ 24 ಘಂಟೆಗಳು: ಕರಾವಳಿಯ ಎಲ್ಲಾ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಒಂದೆರಡು ಕಡೆಗಳಲ್ಲಿ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.  ದಕ್ಷಿಣ ಒಳನಾಡಿನ ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಮುಂದಿನ 48 ಘಂಟೆಗಳು: ಕರಾವಳಿಯ ಎಲ್ಲಾ ಜಿಲ್ಲೆಗಳ ಮತ್ತು ದಕ್ಷಿಣ ಒಳನಾಡಿನ ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಗುಡುಗು ಮುನ್ನೆಚ್ಚರಿಕೆ:

ಮುಂದಿನ 48 ಘಂಟೆಗಳು: ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಿಂಚು ಸಹಿತ ಗುಡುಗಿನ ಸಾಧ್ಯತೆ ಇದೆ. ಒಳನಾಡಿನ ಒಂದೆರಡು ಕಡೆಗಳಲ್ಲಿ ಬಿರುಗಾಳಿಯ ವೇಗವು ಘಂಟೆಗೆ 30-40 ಕಿ.ಮೀ. ಇರುವ ಸಾಧ್ಯತೆ ಇದೆ.

ಮೀನುಗಾರರಿಗೆ ಎಚ್ಚರಿಕೆ: ಮುಂದಿನ 24 ಗಂಟೆಗಳಲ್ಲಿ ಕರ್ನಾಟಕ ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 40-45 ಕಿಮೀ ಇಂದ 55 ಕಿಮೀ ವೇಗದಲ್ಲಿ ಬೀಸುವ ವಾತಾವರಣವಿರುತ್ತದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

ಮುಂದಿನ 24 ಘಂಟೆಗಳ ಹೊರನೋಟ: ರಾಜ್ಯದ ಹವಾಮಾನದಲ್ಲಿ ಹೆಚ್ಚಿನ ಬದಲಾವಣೆ ಇಲ್ಲ.

15 ನೇ ಜುಲೈ 2023 ರ ಬೆಳಗ್ಗೆವರೆಗಿನ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ:

ಮುಂದಿನ 24 ಗಂಟೆಗಳು: ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಒಂದೆರಡು ಬಾರಿ ಹಗುರದಿಂದ ಸಾಧಾರಣ ಮಳೆ/ಗುಡುಗುಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.  ಕೆಲವೊಮ್ಮೆ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆ ಇದೆ.  ಗರಿಷ್ಠ ಉಷ್ಣಾಂಶ 28 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿರುತ್ತದೆ.

ಮುಂದಿನ 48 ಗಂಟೆಗಳು: ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಒಂದೆರಡು ಬಾರಿ ಹಗುರದಿಂದ ಸಾಧಾರಣ ಮಳೆ/ಗುಡುಗುಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.  ಕೆಲವೊಮ್ಮೆ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆ ಇದೆ.  ಗರಿಷ್ಠ ಉಷ್ಣಾಂಶ 29 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿರುತ್ತದೆ.

Exit mobile version