ಸಿನಿಮಾ

ವಿವಿಧ ದೇಶಗಳ ಸ್ಥಿತಿಗತಿ ಜನಜೀವನ ಹಾಗೂ ಸಂಸ್ಕೃತಿ ಪ್ರತಿಬಿಂಬ

ಜನವರಿ 30ರಿಂದ ಫೆಬ್ರವರಿ 06ರವರೆಗೂ ಬೆಂಗಳೂರು ಚಿತ್ರೋತ್ಸವದಲ್ಲಿ 65 ದೇಶಗಳ ಸುಮಾರು 225 ಅತ್ಯುತ್ತಮ ಚಲನಚಿತ್ರಗಳು ಪ್ರದರ್ಶನಗೊಳ್ಳಲಿದೆ. ಆಯಾ ದೇಶದ ಸ್ಥಿತಿ-ಗತಿ, ಜನ ಜೀವನ ಮತ್ತು ಸಂಸ್ಕೃತಿಯನ್ನು ಬಿಂಬಿಸಲಿವೆ. ವಿಶ್ವದ ಪ್ರತಿಷ್ಠಿತ ಚಲನಚಿತ್ರೋತ್ಸವಗಳಲ್ಲಿ ಪಾಲ್ಗೊಂಡಿದ್ದ ಅತ್ಯುತ್ತಮ ಚಲನಚಿತ್ರಗಳು ಈ ಚಿತ್ರೋತ್ಸವದಲ್ಲಿ ‘ಬೆಂಗಳೂರಿನಲ್ಲಿ ಜಗತ್ತು’ ಎನ್ನುವ ಶೀರ್ಷಿಕೆಯಡಿ ಈ ಚಿತ್ರೋತ್ಸವದಲ್ಲಿ ಪ್ರದರ್ಶನಗೊಳ್ಳಲಿವೆ.

ಈ ಚಿತ್ರೋತ್ಸವವನ್ನು ಪ್ರತೀ ವರ್ಷವೂ ಅರ್ಥಪೂರ್ಣವಾದ ಧ್ಯೇಯವಾಕ್ಯದ ಮೂಲಕ ನಡೆಸಲಾಗುತ್ತಿದೆ. ಈ ಬಾರಿ ರಾಷ್ಟ್ರಕವಿ ಡಾ.ಜಿ.ಎಸ್‌. ಶಿವರುದ್ರಪ್ಪ ಅವರ ಪ್ರಸಿದ್ಧ ಗೀತೆಯಾಗಿರುವ ‘ಸ್ತ್ರೀ ಎಂದರೆ ಅಷ್ಟೇ ಸಾಕೆ’ ಎಂಬ ಸಾಲಿನೊಂದಿಗೆ ʼಸ್ತ್ರೀ ಸಂವೇದನೆ, ಸಮಾನತೆಯ ದನಿʼ ಎಂಬ ಟ್ಯಾಗ್‌ ಲೈನ್‌ ಹೊಂದಿರುವ ಧ್ಯೇಯವಾಕ್ಯದೊಂದಿಗೆ ಆಚರಿಸಲಾಗುತ್ತಿದೆ.

ಈ ಚಿತ್ರೋತ್ಸವದಲ್ಲಿ ಏಷಿಯನ್‌ ಸಿನಿಮಾ ಸ್ಪರ್ಧಾ ವಿಭಾಗ, ಚಿತ್ರ ಭಾರತಿ (ಭಾರತೀಯ ಸಿನಿಮಾ ಸ್ಪರ್ಧಾ ವಿಭಾಗ), ಕನ್ನಡ ಸಿನಿಮಾ ಸ್ಪರ್ಧಾ ವಿಭಾಗ, ಸಮಕಾಲೀನ ವಿಶ್ವ ಸಿನಿಮಾ, ಕನ್ನಡ ಜನಪ್ರಿಯ ಸಿನಿಮಾ, ಫಿಪ್ರೆಸ್ಕಿ – ವಿಮರ್ಶಕರ ವಾರ, ಜೀವನ ಕಥನ ಆಧಾರಿತ ಚಿತ್ರಗಳು, ದೇಶ ಕೇಂದ್ರಿತ ವಿಶೇಷ: ಪೋಲೆಂಡ್‌, ಭಾರತೀಯ ಉಪಭಾಷಾ ಚಲನಚಿತ್ರಗಳು, ಪುನರಾವಲೋಕನ‌ ಮುಂತಾದ ವಿಭಾಗಗಳಡಿ ಹಲವು ಚಿತ್ರಗಳನ್ನು ಪ್ರದರ್ಶಿಸಲಾಗುತ್ತದೆ.

ವರನಟ  ಡಾ. ರಾಜಕುಮಾರ್‌ ಅಭಿನಯದ ಐದು ಮಹತ್ವದ ಕನ್ನಡ ಚಲನಚಿತ್ರಗಳ ಪ್ರದರರ್ಶನ, ಪೋಲೆಂಡಿನ ಪ್ರಖ್ಯಾತ ನಿರ್ದೇಶಕ ಆಂದ್ರೆ ವಾಜ್ದಾ ಅವರ ನಿರ್ದೇಶನದ ಏಳು ಪೋಲಿಷ್‌ ಚಲನಚಿತ್ರಗಳ ಪ್ರದರ್ಶನ, ಖ್ಯಾತ ಅಭಿನೇತ್ರಿ ಸ್ಮಿತಾ ಪಾಟೀಲ್‌ ಅವರ ಹೆಸರಾಂತ ಚಲನಚಿತ್ರಗಳ ಪ್ರದರ್ಶನ, ಥಾಯ್ಲೆಂಡಿನ ಖ್ಯಾತ ನಿರ್ದೇಶಕ ಅಚಿತಪಾಂಗ್‌ ವೀರಸೆಥಕುಲ್ ಅವರ ನಾಲ್ಕು ಪ್ರಮುಖ ಚಲನಚಿತ್ರಗಳ ಪ್ರದರ್ಶನ, ಪ್ರತಿಷ್ಠಿತ ಚಲನಚಿತ್ರೋತ್ಸವಗಳಲ್ಲಿ ಜನಮನ್ನಣೆ ಪಡೆದ ಸಮಕಾಲೀನ ಭಾರತೀಯ ಚಲನಚಿತ್ರಗಳ ಪ್ರದರ್ಶನ, ಸಂರಕ್ಷಿಸಲ್ಪಟ್ಟ ಮಹತ್ವದ ಭಾರತೀಯ ಚಲನಚಿತ್ರಗಳ ಪ್ರದರ್ಶನ ಕೂಡಾ ನಡೆಯಲಿದೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!