Home ಪರಿಸರಕರ್ನಾಟಕ ರಾಜ್ಯದ ಹಲವೆಡೆ ಮಳೆ ಸಾಧ್ಯತೆ

ಕರ್ನಾಟಕ ರಾಜ್ಯದ ಹಲವೆಡೆ ಮಳೆ ಸಾಧ್ಯತೆ

by Kumara Raitha
0 comments

ಮಂಗಳವಾರ, 11 ನೇ  ಜುಲೈ 2023 / 20 ನೇ  ಆಷಾಢ 1945 ಶಕ ಬೆಳಿಗ್ಗೆ 0830 ಘಂಟೆಗೆ ದಾಖಲಿಸಿರುವ ವೀಕ್ಷಣೆಯ ಸಾರಾಂಶ:  ನೈರುತ್ಯ ಮುಂಗಾರು ರಾಜ್ಯದಾದ್ಯಂತ ದುರ್ಬಲವಾಗಿತ್ತು. ಕರಾವಳಿಯ ಬಹುತೇಕ ಕಡೆಗಳಲ್ಲಿ; ದಕ್ಷಿಣ ಒಳನಾಡಿನ ಕೆಲವು  ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ.

ಮುಖ್ಯ ಮಳೆ ಪ್ರಮಾಣಗಳು (ಸೆಂ.ಮೀ. ನಲ್ಲಿ): ಮಂಗಳೂರು (ದಕ್ಷಿಣ ಕನ್ನಡ ಜಿಲ್ಲೆ) 5; ಕ್ಯಾಸಲ್ ರಾಕ್ (ಉತ್ತರ ಕನ್ನಡ ಜಿಲ್ಲೆ), ದೊಡ್ಡಬಳ್ಳಾಪುರ (ಬೆಂಗಳೂರು ಗ್ರಾಮಾಂತರ ಜಿಲ್ಲೆ) ತಲಾ 3; ಅಂಕೋಲಾ (ಉತ್ತರ ಕನ್ನಡ ಜಿಲ್ಲೆ), ಪಣಂಬೂರು (ದಕ್ಷಿಣ ಕನ್ನಡ ಜಿಲ್ಲೆ), ದೇವನಹಳ್ಳಿ (ಬೆಂಗಳೂರು ಗ್ರಾಮಾಂತರ ಜಿಲ್ಲೆ), ಕೆಎಸ್‌ಎನ್‌ಡಿಎಂಸಿ ಕ್ಯಾಂಪಸ್, ಬೆಂಗಳೂರು ಕೆಐಎಎಲ್ ವಿಮಾನ ನಿಲ್ದಾಣ, ಯಲಹಂಕ ಐಎಎಫ್ (ಎಲ್ಲಾ ಬೆಂಗಳೂರು ನಗರ ಜಿಲ್ಲೆ) ತಲಾ 2; ಶಿರಾಲಿ ಪಿಟಿಒ, ಗೇರುಸೊಪ್ಪಾ, ಕಾರವಾರ, ಕದ್ರಾ, ಜೋಯಿಡಾ, ಮಂಕಿ, ಬೇಲಿಕೇರಿ, ಗೋಕರ್ಣ (ಎಲ್ಲವೂ ಉತ್ತರ ಕನ್ನಡ ಜಿಲ್ಲೆ), ಉಡುಪಿ, ಕಾರ್ಕಳ, ಕೊಲ್ಲೂರು, ಕೋಟ (ಎಲ್ಲವೂ ಉಡುಪಿ ಜಿಲ್ಲೆ), ಮಂಗಳೂರು ವಿಮಾನ ನಿಲ್ದಾಣ, ಉಪ್ಪಿನಂಗಡಿ (ಎರಡೂ ದಕ್ಷಿಣ ಕನ್ನಡ ಜಿಲ್ಲೆ), ಬೆಳ್ಳೂರು (ಮಂಡ್ಯ ಜಿಲ್ಲೆ), ಭಾಗಮಂಡಲ (ಕೊಡಗು ಜಿಲ್ಲೆ), ಬೆಂಗಳೂರು ನಗರ, ಬೆಂಗಳೂರು ಎಚ್‌ಎಎಲ್ ವಿಮಾನ ನಿಲ್ದಾಣ (ಬೆಂಗಳೂರು ನಗರ ಜಿಲ್ಲೆ), ಕುಣಿಗಲ್ (ತುಮಕೂರು ಜಿಲ್ಲೆ), ತಾಳಗುಪ್ಪ (ಶಿವಮೊಗ್ಗ ಜಿಲ್ಲೆ), ಹೊಸಕೋಟೆ (ಬೆಂಗಳೂರು ಗ್ರಾಮಾಂತರ ಜಿಲ್ಲೆ), ರಾಮನಗರ, ಹಿರಿಯೂರು (ಚಿತ್ರದುರ್ಗ ಜಿಲ್ಲೆ) ತಲಾ 1.

13 ನೇ ಜುಲೈ 2023 ರ ಬೆಳಗ್ಗೆ ವರೆಗಿನ ರಾಜ್ಯದ ಮಳೆ ಮುನ್ಸೂಚನೆ:

ಮುಂದಿನ 24 ಘಂಟೆಗಳು: ಕರಾವಳಿಯ ಬಹುತೇಕ ಕಡೆಗಳಲ್ಲಿ; ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ  ಮಳೆ/ ಗುಡುಗುಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.

ಮುಂದಿನ 48 ಘಂಟೆಗಳು: ಕರಾವಳಿಯ ಬಹುತೇಕ ಕಡೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಮಳೆ/ ಗುಡುಗುಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.  ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ  ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.

ಭಾರೀ ಮಳೆ ಮುನ್ನೆಚ್ಚರಿಕೆ:

ಮುಂದಿನ 48 ಘಂಟೆಗಳು: ಕರಾವಳಿಯ ಎಲ್ಲಾ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಗುಡುಗು ಮುನ್ನೆಚ್ಚರಿಕೆ:

ಮುಂದಿನ 24 ಘಂಟೆಗಳು: ರಾಜ್ಯದಾದ್ಯಂತ ಒಂದೆರಡು ಕಡೆಗಳಲ್ಲಿ ಮಿಂಚು ಸಹಿತ ಗುಡುಗಿನ ಸಾಧ್ಯತೆ ಇದೆ.

ಮುಂದಿನ 48 ಘಂಟೆಗಳು: ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಿಂಚು ಸಹಿತ ಗುಡುಗಿನ ಸಾಧ್ಯತೆ ಇದೆ.

ಮೀನುಗಾರರಿಗೆ ಎಚ್ಚರಿಕೆ: ಇಲ್ಲ.

ಮುಂದಿನ 24 ಘಂಟೆಗಳ ಹೊರನೋಟ: ರಾಜ್ಯದ ಹವಾಮಾನದಲ್ಲಿ ಹೆಚ್ಚಿನ ಬದಲಾವಣೆ ಇಲ್ಲ.

13 ನೇ ಜುಲೈ 2023 ರ ಬೆಳಗ್ಗೆವರೆಗಿನ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ:

ಮುಂದಿನ 24 ಗಂಟೆಗಳು: ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ.  ಒಂದೆರಡು ಬಾರಿ ಹಗುರದಿಂದ ಸಾಧಾರಣ ಮಳೆ/ಗುಡುಗುಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.  ಕೆಲವೊಮ್ಮೆ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆ ಇದೆ.  ಗರಿಷ್ಠ ಉಷ್ಣಾಂಶ 26 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿರುತ್ತದೆ.

ಮುಂದಿನ 48 ಗಂಟೆಗಳು: ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಬಾರಿ ಹಗುರದಿಂದ ಸಾಧಾರಣ ಮಳೆ/ಗುಡುಗುಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.  ಗರಿಷ್ಠ ಉಷ್ಣಾಂಶ 26 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿರುತ್ತದೆ.

You may also like

Leave a Comment

error: Content is protected !!