ಪರಿಸರ

Weather Report;  ಕರ್ನಾಟಕದ ಯಾವ ಸ್ಥಳಗಳಲ್ಲಿ ಮಳೆ ಸಾಧ್ಯತೆ ಇದೆ ?

ಸೋಮವಾರ , 14 ನೇ  ಆಗಸ್ಟ್ 2023 / 23ನೇ  ಶ್ರಾವಣ 1945 ಶಕ ಬೆಳಿಗ್ಗೆ 0830 ಘಂಟೆಗೆ ದಾಖಲಿಸಿರುವ ವೀಕ್ಷಣೆಯ ಸಾರಾಂಶ:  ನೈರುತ್ಯ ಮುಂಗಾರು ರಾಜ್ಯದಲ್ಲಿ  ದುರ್ಬಲವಾಗಿತ್ತು.  ಕರಾವಳಿಯ ಕೆಲವು ಕಡೆಗಳಲ್ಲಿ ಮತ್ತು ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ.

ಮುಖ್ಯ ಮಳೆ ಪ್ರಮಾಣಗಳು (ಸೆಂ.ಮೀ. ನಲ್ಲಿ):  ಎಲೆಕ್ಟ್ರಾನಿಕ್ ಸಿಟಿ ARG (ಬೆಂಗಳೂರು ನಗರ ಜಿಲ್ಲೆ) 3; ಕ್ಯಾಸಲ್ ರಾಕ್ (ಉತ್ತರ ಕನ್ನಡ ಜಿಲ್ಲೆ) 2; ಕಾರ್ಕಳ, ಸಿದ್ದಾಪುರ (ಎರಡೂ ಉಡುಪಿ ಜಿಲ್ಲೆ), ಮಂಗಳೂರು ವಿಮಾನ ನಿಲ್ದಾಣ, ಭಾಗಮಂಡಲ (ಕೊಡಗು ಜಿಲ್ಲೆ) ತಲಾ 1.

16 ನೇ ಆಗಸ್ಟ್ 2023 ರ ಬೆಳಗ್ಗೆ ವರೆಗಿನ ರಾಜ್ಯದ ಮಳೆ ಮುನ್ಸೂಚನೆ:

ಮುಂದಿನ 24 ಘಂಟೆಗಳು: ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ಕೆಲವು  ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಮುಂದಿನ 48 ಘಂಟೆಗಳು: ಕರಾವಳಿಯ ಕೆಲವು ಕಡೆಗಳಲ್ಲಿ ಮತ್ತು ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಭಾರೀ ಮಳೆ ಮುನ್ನೆಚ್ಚರಿಕೆ: ಇಲ್ಲ

ಗುಡುಗು ಮುನ್ನೆಚ್ಚರಿಕೆ:

ಮುಂದಿನ 24  ಘಂಟೆಗಳು: ಒಳನಾಡಿನ ಒಂದೆರಡು ಕಡೆಗಳಲ್ಲಿ ಮಿಂಚು ಸಹಿತ ಗುಡುಗಿನ ಸಾಧ್ಯತೆ ಇದೆ.

ಮೀನುಗಾರರಿಗೆ ಎಚ್ಚರಿಕೆ: ಇಲ್ಲ.

ಮುಂದಿನ 24 ಘಂಟೆಗಳ ಹೊರನೋಟ: ರಾಜ್ಯದ ಹವಾಮಾನದಲ್ಲಿ ಹೆಚ್ಚಿನ ಬದಲಾವಣೆ ಇಲ್ಲ.

16 ನೇ ಆಗಸ್ಟ್ 2023 ರ ಬೆಳಗ್ಗೆವರೆಗಿನ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ:

ಮುಂದಿನ 24 ಗಂಟೆಗಳು: ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಕಡೆಗಳಲ್ಲಿ ಹಗುರ ಮಳೆ/ಗುಡುಗುಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.   ಗರಿಷ್ಠ ಉಷ್ಣಾಂಶ 30 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಷಿಯಸ್ ಇರುವ ಸಾಧ್ಯತೆಗಳಿರುತ್ತದೆ.

ಮುಂದಿನ 48 ಗಂಟೆಗಳು: ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಕಡೆಗಳಲ್ಲಿ ಹಗುರ  ಮಳೆಯಾಗುವ ಸಾಧ್ಯತೆ ಇದೆ.   ಗರಿಷ್ಠ ಉಷ್ಣಾಂಶ 30 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿರುತ್ತದೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!