ಜುಲೈ 07ನೇ ತಾರೀಖು ಕರಾವಳಿಯ ಎಲ್ಲ ಜಿಲ್ಲೆಗಳಿಗೂ, ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆ, ದಕ್ಷಿಣ ಒಳನಾಡಿನ ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಅನ್ನು ಭಾರತೀಯ ಹವಾಮಾನ ಇಲಾಖೆ ಘೋಷಿಸಿದೆ.
ಜುಲೈ 08ನೇ ತಾರೀಖು ಕರಾವಳಿಯ ಎಲ್ಲ ಜಿಲ್ಲೆಗಳಿಗೂ, ಉತ್ತರ ಒಳನಾಡಿನ ಬೆಳಗಾವಿ, ಕಲ್ಬುರ್ಗಿ ಜಿಲ್ಲೆ, ದಕ್ಷಿಣ ಒಳನಾಡಿನ ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಜುಲೈ 04 ರಿಂದ ಜುಲೈ 09ರವರೆಗೆ ಉತ್ತಮ ಮಳೆಯಾಗುವ ಸಾಧ್ಯತೆಗಳಿವೆ. ಇಂದು ಮತ್ತು ನಾಳೆ ಕನಿಷ್ಟ ಹಾಗೂ ಗರಿಷ್ಠ ಉಷ್ಣಾಂಶ ಕ್ರಮವಾಗಿ 21, 28 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ.
ಜುಲೈ 04 ವಾತಾವರಣದ ವಿದ್ಯಮಾನಗಳು
ಇಂದು 15 ಡಿಗ್ರಿ ಉತ್ತರ ಅಕ್ಷಾಂಶದಲ್ಲಿ ಸಮುದ್ರಮಟ್ಟದಿಂದ 4.05 ರಿಂದ 7.06 ಕಿಲೋ ಮೀಟರ್ ವರೆಗೂ ಪೂರ್ವ ಪಶ್ಚಿಮ ಗಾಳಿದಿಕ್ಕಿನ ಬದಲಾವಣೆ ವಲಯ ಅಂದರೆ ಈಸ್ಟ್ ವೆಸ್ಟ್ ವಿಂಡ್ ಶೆಲ್ ಜೋನ್ ಗೋಚರವಾಗಿದೆ.
ಸಮುದ್ರಮಟ್ಟದಲ್ಲಿ ಟ್ರಪ್ಹ್
ಎರಡನೇಯದು ಗುಜರಾತಿನಿಂದ ಕೇರಳ ಕರಾವಳಿಗೆ ಸೇರಿಸುವ ಸಮುದ್ರ ಪ್ರದೇಶದಲ್ಲಿ ಸಮುದ್ರಮಟ್ಟದಲ್ಲಿ ಒಂದು ಟ್ರಪ್ಹ್ ಗೋಚರವಾಗಿದೆ. ಈ ಎರಡೂ ಕಾರಣಗಳಿಂದ ಮುಂದಿನ ಐದು ದಿನಗಳವರೆಗೆ ಕರ್ನಾಟಕ ರಾಜ್ಯಕ್ಕೆ ಮಳೆ ಪ್ರಮಾಣ ಹೆಚ್ಚಿರುವ ಸಾಧ್ಯತೆ ಇದೆ.
ಕರಾವಳಿ ಕರ್ನಾಟಕ ಹಾಗೂ ದಕ್ಷಿಣ ಒಳನಾಡಿನಲ್ಲಿ ಜುಲೈ 04, 05 ತಾರೀಖುಗಳಂದು ಮಳೆ ಪ್ರಮಾಣ ಹೆಚ್ಚಿರುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ ಕೆಲವು ಅಲರ್ಟ್ ಗಳನ್ನು ಘೋಷಿಸಿದೆ.
ರೆಡ್ ಅಲರ್ಟ್
ಜುಲೈ 04 ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ಜಿಲ್ಲೆಗಳ ಕೆಲವೆಡೆ ಭಾರಿಯಿಂದ ಅತೀಭಾರಿ ಮಳೆಯಾಗುವ ಸಾಧ್ಯತೆ ಇದೆ. ಅಂದಾಜು 20 ಸೆಂಟಿ ಮೀಟರ್ ತನಕ ಮಳೆಯಾಗುವ ಸಾಧ್ಯತೆ ಇದೆ. ಇದರಿಂದಾಗಿ ರೆಡ್ ಅಲರ್ಟ್ ನೀಡಲಾಗಿದೆ.
ದಕ್ಷಿಣ ಒಳನಾಡಿಗೆ ಹಾಸನ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಅತೀಭಾರಿ ಮಳೆಯಾಗುವ ಸಾಧ್ಯತೆ ಇದೆ. ಆರೆಂಜ್ ಅಲರ್ಟ್ ಅನ್ನು ಭಾರತೀಯ ಹವಾಮಾನ ಇಲಾಖೆ ಘೋಷಿಸಿದೆ.
ಯೆಲ್ಲೋ ಅಲರ್ಟ್
ಇಂದು (ಜುಲೈ 04) ಉತ್ತರ ಒಳನಾಡಿಗೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಧಾರವಾಡ, ಹಾವೇರಿ, ರಾಯಚೂರು ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ದಕ್ಷಿಣ ಒಳನಾಡಿನಲ್ಲಿ ಚಿತ್ರದುರ್ಗ, ದಾವಣಗೆರೆ, ಮೈಸೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಆರೆಂಜ್ ಅಲರ್ಟ್
ಜುಲೈ 05ರಂದು ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ದಕ್ಷಿಣ ಒಳನಾಡಿನ ಬಳ್ಳಾರಿ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಿಗೆ, ಉತ್ತರ ಒಳನಾಡಿನ ಗದಗ್, ಧಾರವಾಡ ಮತ್ತು ಬೆಳಗಾವಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಲಾಗಿದೆ. ಈ ಜಿಲ್ಲೆಗಳ ಕೆಲವೆಡೆ ಅತೀಭಾರಿ ಮಳೆಯಾಗುವ ಸಾಧ್ಯತೆಗಳಿವೆ.
ಜುಲೈ 05 ರಂದು ಕರಾವಳಿಯ ಉಡುಪಿ ಜಿಲ್ಲೆ, ಉತ್ತರ ಒಳನಾಡಿನ ಹಾವೇರಿ, ಕೊಪ್ಪಳ, ಬಾಗಲಕೋಟೆ ಜಿಲ್ಲೆ, ದಕ್ಷಿಣ ಒಳನಾಡಿನ ಹಾಸನ, ದಾವಣಗೆರೆ ಜಿಲ್ಲೆಗಳಲ್ಲಿ ಒಂದೆರಡು ಕಡೆ ಭಾರಿಮಳೆಯಾಗುವ ಸಾಧ್ಯತೆಗಳಿವೆ. ಈ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಜುಲೈ 06 ರಂದು ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆ, ದಕ್ಷಿಣ ಒಳನಾಡಿನ ಚಿಕ್ಕಮಗಳೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಈ ಜಿಲ್ಲೆಗಳ ಕೆಲವೆಡೆ ಭಾರಿಮಳೆಯಾಗುವ ಸಾಧ್ಯತೆಗಳಿವೆ. ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಇವತ್ತಿನಿಂದ ನಾಲ್ಕನೇ ದಿನಕ್ಕೆ ಜುಲೈ 07ನೇ ತಾರೀಖು ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆ, ದಕ್ಷಿಣ ಒಳನಾಡಿನ ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಕೊಡಲಾಗಿದೆ.
ಇಂದಿನಿಂದ ಐದನೇ ದಿನಕ್ಕೆ ಅಂದರೆ ಜುಲೈ 08ನೇ ತಾರೀಖು ಉತ್ತರ ಒಳನಾಡಿನ ಬೆಳಗಾವಿ, ಗುಲ್ಬರ್ಗಾ, ದಕ್ಷಿಣ ಒಳನಾಡಿನ ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ, ಕರಾವಳಿಯ ಎಲ್ಲ ಜಿಲ್ಲೆಗಳ ಕೆಲವೆಡೆ ಭಾರಿಮಳೆಯಾಗುವ ಸಾಧ್ಯತೆಗಳಿರುವುದರಿಂದ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಜುಲೈ 04, 05 ತಾರೀಖುಗಳಂದು ಬೆಂಗಳೂರು ಮತ್ತು ಸುತ್ತಮುತ್ತಲಿನಲ್ಲಿ ಆಕಾಶ ಮೋಡವಾಗಿರುತ್ತದೆ. ಕೆಲವು ಸಮಯ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ. ಕನಿಷ್ಟ ಹಾಗೂ ಗರಿಷ್ಠ ಉಷ್ಣಾಂಶ ಕ್ರಮವಾಗಿ 21, 28 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆಗಳಿವೆ.
ಭಾರಿಮಳೆ ದಾಖಲು
ಹವಾಮಾನ ವರದಿ ಪ್ರಕಾರ ಜುಲೈ 03ರಂದು ಕರಾವಳಿಯಲ್ಲಿ ಐದು ಸ್ಥಳಗಳಲ್ಲಿ ಅತೀ ಭಾರಿಮಳೆಯಾಗಿದೆ. 12 ರಿಂದ 19 ಸೆಂಟಿ ಮೀಟರ್ ತನಕ ಮಳೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಮುಲ್ಕಿಯಲ್ಲಿ 17 ಸೆಂಟಿ ಮೀಟರ್, ಪಣಂಬೂರಿನಲ್ಲಿ 15 ಸೆಂಟಿ ಮೀಟರ್, ಕುಮ್ಟಾದಲ್ಲಿ 13 ಸೆಂಟಿ ಮೀಟರ್, ಅಂಕೋಲದಲ್ಲಿ 12 ಸೆಂಟಿ ಮೀಟರ್, ಮಂಗಳೂರು ವಿಮಾನ ನಿಲ್ದಾಣದಲ್ಲಿ 12 ಸೆಂಟಿ ಮೀಟರ್ ಮಳೆಯಾಗಿದೆ. ಇನ್ನು 09 ಕಡೆ ಭಾರಿ ಮಳೆ ವರದಿಯಾಗಿದೆ. ಉತ್ತರ ಒಳನಾಡಿನ ಕೊಪ್ಪಳ ಜಿಲ್ಲೆಯಲ್ಲಿ 06 ಸೆಂಟಿ ಮೀಟರ್ ಮಳೆಯಾಗಿದೆ.