ಸೋಮವಾರ, 10 ನೇ ಜುಲೈ 2023 / 19 ನೇ ಆಷಾಢ 1945 ಶಕ. ಬೆಳಿಗ್ಗೆ 0830 ಘಂಟೆಗೆ ದಾಖಲಿಸಿರುವ ವೀಕ್ಷಣೆಯ ಸಾರಾಂಶ: ನೈರುತ್ಯ ಮುಂಗಾರು ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಸಾಮಾನ್ಯವಾಗಿತ್ತು ಆದರೆ ಉತ್ತರ ಒಳನಾಡಿನಲ್ಲಿ ದುರ್ಬಲವಾಗಿತ್ತು.
ಕರಾವಳಿಯ ಬಹುತೇಕ ಕಡೆಗಳಲ್ಲಿ; ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಿದೆ.
ಮುಖ್ಯ ಮಳೆ ಪ್ರಮಾಣಗಳು (ಸೆಂ.ಮೀ. ನಲ್ಲಿ): ಕ್ಯಾಸಲ್ ರಾಕ್ (ಉತ್ತರ ಕನ್ನಡ ಜಿಲ್ಲೆ) 5; ಕೊಲ್ಲೂರು, ಕಾರ್ಕಳ, ಕೋಟ, ಸಿದ್ದಾಪುರ (ಎಲ್ಲಾ ಉಡುಪಿ ಜಿಲ್ಲೆ), ಕುಮಟಾ, ಕಾರವಾರ, ಶಿರಾಲಿ ಪಿಟಿಒ, ಗೇರುಸೊಪ್ಪ (ಎಲ್ಲವೂ ಉತ್ತರ ಕನ್ನಡ ಜಿಲ್ಲೆ), ಧರ್ಮಸ್ಥಳ, ಸುಬ್ರಹ್ಮಣ್ಯ, ಬೆಳ್ತಂಗಡಿ (ಎಲ್ಲ ದಕ್ಷಿಣ ಕನ್ನಡ ಜಿಲ್ಲೆ), ಕೊಟ್ಟಿಗೆಹಾರ (ಚಿಕ್ಕಮಗಳೂರು ಜಿಲ್ಲೆ) ತಲಾ 3; ಜನಮನೆ, ಬೇಲಿಕೇರಿ, ಸಿದ್ದಾಪುರ, ಮಂಕಿ, ಜೋಯಿಡಾ, ಹೊನ್ನಾವರ, ಗೋಕರ್ಣ (ಎಲ್ಲವೂ ಉತ್ತರ ಕನ್ನಡ ಜಿಲ್ಲೆ), ಕುಂದಾಪುರ (ಉಡುಪಿ ಜಿಲ್ಲೆ), ಉಡುಪಿ, ಅಕ್ಕಿಆಲೂರು (ಹಾವೇರಿ ಜಿಲ್ಲೆ), ಶೃಂಗೇರಿ (ಚಿಕ್ಕಮಗಳೂರು ಜಿಲ್ಲೆ), ಲಿಂಗನಮಕ್ಕಿ, ತಾಳಗುಪ್ಪ (ಎರಡೂ ಶಿವಮೊಗ್ಗ ಜಿಲ್ಲೆ) ತಲಾ 2 ; ಮಂಚಿಕೆರೆ, ಅಂಕೋಲಾ, ಜಗಲಬೆಟ್, ಕಿರವತ್ತಿ, ಕದ್ರಾ (ಎಲ್ಲಾ ಉತ್ತರ ಕನ್ನಡ ಜಿಲ್ಲೆ), ಮಂಗಳೂರು, ಪುತ್ತೂರು, ಸುಳ್ಯ, ಮೂಲ್ಕಿ, ಮಾಣಿ (ಎಲ್ಲ ದಕ್ಷಿಣ ಕನ್ನಡ ಜಿಲ್ಲೆ), ಗುತ್ತಲ್, ಹಾವೇರಿ ಪಿಟಿಒ, ಶಿಗ್ಗಾಂವಿ (ಎಲ್ಲ ಹಾವೇರಿ ಜಿಲ್ಲೆ), ಗುಂಜಿ (ಬೆಳಗಾವಿ ಜಿಲ್ಲೆ), ವೈ ಎನ್ ಹೊಸಕೋಟೆ, ಗುಬ್ಬಿ (ಎರಡೂ ತುಮಕೂರು ಜಿಲ್ಲೆ), ಪರಶುರಾಂಪುರ, ನಾಯಕನಹಟ್ಟಿ, ಬಿ ದುರ್ಗ (ಎಲ್ಲವೂ ಚಿತ್ರದುರ್ಗ ಜಿಲ್ಲೆ), ಕಮ್ಮರಡಿ, ಎನ್ ಆರ್ ಪುರ, ಕೊಪ್ಪ, ಜಯಪುರ (ಎಲ್ಲಾ ಚಿಕ್ಕಮಗಳೂರು ಜಿಲ್ಲೆ), ಚಿತ್ರದುರ್ಗ, ಚಿಕ್ಕಬಳ್ಳಾಪುರ, ಸಕಲೇಶಪುರ (ಹಾಸನ ಜಿಲ್ಲೆ) ತಲಾ 1.
12 ನೇ ಜುಲೈ 2023 ರ ಬೆಳಗ್ಗೆ ವರೆಗಿನ ರಾಜ್ಯದ ಮಳೆ ಮುನ್ಸೂಚನೆ:
ಮುಂದಿನ 24 ಘಂಟೆಗಳು: ಕರಾವಳಿಯ ಬಹುತೇಕ ಕಡೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಮಳೆ/ ಗುಡುಗುಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.
ಮುಂದಿನ 48 ಘಂಟೆಗಳು: ಕರಾವಳಿಯ ಬಹುತೇಕ ಕಡೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಮಳೆ/ ಗುಡುಗುಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.
ಭಾರೀ ಮಳೆ ಮುನ್ನೆಚ್ಚರಿಕೆ:
ಮುಂದಿನ 48 ಘಂಟೆಗಳು: ಕರಾವಳಿಯ ಎಲ್ಲಾ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಗುಡುಗು ಮುನ್ನೆಚ್ಚರಿಕೆ:
ಮುಂದಿನ 48 ಘಂಟೆಗಳು: ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಿಂಚು ಸಹಿತ ಗುಡುಗಿನ ಸಾಧ್ಯತೆ ಇದೆ. ರಾಜ್ಯದಾದ್ಯಂತ ಒಂದೆರಡು ಕಡೆಗಳಲ್ಲಿ ಬಿರುಗಾಳಿಯ ವೇಗವು ಘಂಟೆಗೆ 30-40 ಕಿ.ಮೀ. ಇರುವ ಸಾಧ್ಯತೆ ಇದೆ.
ಮೀನುಗಾರರಿಗೆ ಎಚ್ಚರಿಕೆ: ಇಲ್ಲ.
ಮುಂದಿನ 24 ಘಂಟೆಗಳ ಹೊರನೋಟ: ರಾಜ್ಯದ ಹವಾಮಾನದಲ್ಲಿ ಹೆಚ್ಚಿನ ಬದಲಾವಣೆ ಇಲ್ಲ.
12 ನೇ ಜುಲೈ 2023 ರ ಬೆಳಗ್ಗೆವರೆಗಿನ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ:
ಮುಂದಿನ 24 ಗಂಟೆಗಳು: ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಪ್ರದೇಶಗಳಲ್ಲಿ ಒಂದೆರಡು ಬಾರಿ ಹಗುರದಿಂದ ಸಾಧಾರಣ ಮಳೆ/ಗುಡುಗುಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 28 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿರುತ್ತದೆ.
ಮುಂದಿನ 48 ಗಂಟೆಗಳು: ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಪ್ರದೇಶಗಳಲ್ಲಿ ಒಂದೆರಡು ಬಾರಿ ಹಗುರದಿಂದ ಸಾಧಾರಣ ಮಳೆ/ಗುಡುಗುಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 27 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿರುತ್ತದೆ.