ಮಂಗಳವಾರ, 08 ನೇ  ಆಗಸ್ಟ್ 2023 / 17ನೇ  ಶ್ರಾವಣ 1945 ಶಕ ಬೆಳಿಗ್ಗೆ 0830 ಘಂಟೆಗೆ ದಾಖಲಿಸಿರುವ ವೀಕ್ಷಣೆಯ ಸಾರಾಂಶ:  ನೈರುತ್ಯ ಮುಂಗಾರು ರಾಜ್ಯದಾದ್ಯಂತ ದುರ್ಬಲವಾಗಿತ್ತು.  ಕರಾವಳಿಯ ಬಹುತೇಕ ಕಡೆಗಳಲ್ಲಿ ಮತ್ತು ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ.

ಮುಖ್ಯ ಮಳೆ ಪ್ರಮಾಣಗಳು (ಸೆಂ.ಮೀ. ನಲ್ಲಿ): ಕ್ಯಾಸಲ್ ರಾಕ್ (ಉತ್ತರ ಕನ್ನಡ ಜಿಲ್ಲೆ) 4; ಕದ್ರಾ (ಉತ್ತರ ಕನ್ನಡ ಜಿಲ್ಲೆ) 3; ಸಿದ್ದಾಪುರ (ಉಡುಪಿ ಜಿಲ್ಲೆ), ಶಿರಾಲಿ (ಉತ್ತರ ಕನ್ನಡ ಜಿಲ್ಲೆ), ಲೋಂಡಾ (ಬೆಳಗಾವಿ ಜಿಲ್ಲೆ) ತಲಾ 2; ಮಂಚಿಕೆರೆ (ಉತ್ತರ ಕನ್ನಡ ಜಿಲ್ಲೆ), ಮಂಗಳೂರು ವಿಮಾನ ನಿಲ್ದಾಣ, ಧರ್ಮಸ್ಥಳ (ಎರಡೂ ದಕ್ಷಿಣ ಕನ್ನಡ ಜಿಲ್ಲೆ), ಉಡುಪಿ, ಕಾರ್ಕಳ (ಉಡುಪಿ ಜಿಲ್ಲೆ), ಮುನಿರಾಬಾದ್ (ಕೊಪ್ಪಳ ಜಿಲ್ಲೆ), ಶಿಡ್ಲಘಟ್ಟ (ಚಿಕ್ಕಬಳ್ಳಾಪುರ ಜಿಲ್ಲೆ) ತಲಾ 1.

10 ನೇ ಆಗಸ್ಟ್ 2023 ರ ಬೆಳಗ್ಗೆ ವರೆಗಿನ ರಾಜ್ಯದ ಮಳೆ ಮುನ್ಸೂಚನೆ:

ಮುಂದಿನ 24 ಘಂಟೆಗಳು: ಕರಾವಳಿಯ ಬಹುತೇಕ ಕಡೆಗಳಲ್ಲಿ; ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮತ್ತು ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.

ಮುಂದಿನ 48 ಘಂಟೆಗಳು: ಕರಾವಳಿಯ ಬಹುತೇಕ ಕಡೆಗಳಲ್ಲಿ; ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮತ್ತು ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.

ಭಾರೀ ಮಳೆ ಮುನ್ನೆಚ್ಚರಿಕೆ: ಇಲ್ಲ

ಬಿರುಗಾಳಿ ಮುನ್ನೆಚ್ಚರಿಕೆ:

ಮುಂದಿನ 48 ಘಂಟೆಗಳು: ರಾಜ್ಯದಾದ್ಯಂತ ಒಂದೆರಡು ಕಡೆಗಳಲ್ಲಿ ಬಿರುಗಾಳಿಯ ವೇಗವು ಘಂಟೆಗೆ 30-40 ಕಿ.ಮೀ. ಇರುವ ಸಾಧ್ಯತೆ ಇದೆ.

ಮೀನುಗಾರರಿಗೆ ಎಚ್ಚರಿಕೆ: ಇಲ್ಲ.

ಮುಂದಿನ 24 ಘಂಟೆಗಳ ಹೊರನೋಟ: ರಾಜ್ಯದ ಹವಾಮಾನದಲ್ಲಿ ಹೆಚ್ಚಿನ ಬದಲಾವಣೆ ಇಲ್ಲ.

10 ನೇ ಆಗಸ್ಟ್ 2023 ರ ಬೆಳಗ್ಗೆವರೆಗಿನ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ:

ಮುಂದಿನ 24 ಗಂಟೆಗಳು: ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಪ್ರದೇಶಗಳಲ್ಲಿ ಹಗುರ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.   ಕೆಲವೊಮ್ಮೆ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆ ಇದೆ.  ಗರಿಷ್ಠ ಉಷ್ಣಾಂಶ 29 ಮತ್ತು ಕನಿಷ್ಠ ಉಷ್ಣಾಂಶ 20  ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿರುತ್ತದೆ.

ಮುಂದಿನ 48 ಗಂಟೆಗಳು: ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಪ್ರದೇಶಗಳಲ್ಲಿ ಹಗುರ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.   ಕೆಲವೊಮ್ಮೆ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆ ಇದೆ.  ಗರಿಷ್ಠ ಉಷ್ಣಾಂಶ 29 ಮತ್ತು ಕನಿಷ್ಠ ಉಷ್ಣಾಂಶ 20  ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿರುತ್ತದೆ.

Similar Posts

Leave a Reply

Your email address will not be published. Required fields are marked *